ಭಾರತದಲ್ಲಿ ಒಂದೇ ದಿನದಲ್ಲಿ ದಾಖಲಾಯ್ತು ಅತೀ ಹೆಚ್ಚಿನ ಕೊರೊನಾ ಪ್ರಕರಣ!

ಭಾರತ ಸರಕಾರ ಎಷ್ಟು ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತಿದ್ದರೂ ಸಹ ಕೊರೊನಾ ರೋಗಿಗಳ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು ಆಡಳಿತ ವರ್ಗದ ಹಾಗೂ ಸಾರ್ವಜನಿಕರ ಚಿಂತೆಗೆ ಕಾರಣವಾಗಿದೆ. ಕೇಂದ್ರ ಸರಕಾರದ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಇಂದು ಒಂದೇ ದಿನ ಇಷ್ಟು ದಿನಗಳಲ್ಲಿ ಅತೀ ಹೆಚ್ಚು ಅಂದರೆ 88 ಹೊಸ ಪ್ರಕರಣ ದಾಖಲಾಗಿದ್ದು, ಭಾರತ ಸ್ಟೇಜ್ 3 ಗೆ ಬಂದು ಮುಟ್ಟಿತೇ ಎನ್ನುವ ಅನುಮಾನ ಎಲ್ಲರಲ್ಲೂ ಕಾಡುತ್ತಿದೆ. ಈ ಮೂಲಕ ಭಾರತದಲ್ಲಿ ಒಟ್ಟು ಕೊರೊನಾ ರೋಗಿಗಳ ಸಂಖ್ಯೆ 694 ಕ್ಕೆ ಬಂದು ಮುಟ್ಟಿದೆ. ಈ ಪಟ್ಟಿಯಲ್ಲಿ ಕರ್ನಾಟಕದಿಂದ 55 ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಕೋವಿಡ್ 19 ನಿಯಂತ್ರಣಕ್ಕೆ ಸರಕಾರ ಲಭ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

Comments